Thursday, January 1, 2026

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 12 IAS, 48 IPS ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ.

ಕೊಡಗು ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರನ್ನು ವರ್ಗಾವಣೆ ಮಾಡಿರುವ ಸರಕಾರ ತೆರವಾದ ಸ್ಥಾನಕ್ಕೆ ಬೆಂಗಳೂರಿನ ಗ್ರಾಮೀಣ ಅಭಿವೃದ್ಧಿ ಆಯುಕ್ತರಾಗಿದ್ದ ಎಸ್. ಜೆ. ಸೋಮಶೇಖರ್ ಅವರನ್ನು ನೇಮಿಸಿ‌ ಆದೇಶ ಹೊರಡಿಸಿದೆ.

ಶಿವಮೊಗ್ಗ ಡಿಸಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

ಇನ್ನೂ ಸಾಗರದ ಎಎಸ್ಪಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿಯಾಗಿದ್ದ ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

error: Content is protected !!