March 23, 2026
Monday, March 23, 2026
spot_img

ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ ಕೌಂಡ್ ಡೌನ್: ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಸುತ್ತ ಮುತ್ತ ಜನಸಾಗರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಆಚರಣೆಗೆ ಜನರು ರೆಡಿಯಾಗಿದ್ದು, ಎಲ್ಲೆಡೆ ಸಂಭ್ರಮಾಚರಣೆಗೆ ಕ್ಷಣಗಣನೆ ಆರಂಭಗೊಂಡಿದೆ.

ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರದಂತಹ ಪ್ರಮುಖ ಪ್ರದೇಶಗಳು ದೀಪಾಲಂಕಾರಗಳಿಂದ ಝಗಮಗಿಸುತ್ತಿವೆ. ಪಾರ್ಟಿಪ್ರಿಯರು ಹಾಗೂ ಯುವಜನತೆ ಈಗಾಗಲೇ ಪಬ್‌ಗಳು ಮತ್ತು ರಸ್ತೆಗಳತ್ತ ಉತ್ಸಾಹದಿಂದ ಆಗಮಿಸುತ್ತಿದ್ದಾರೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ನಗರದಾದ್ಯಂತ 20,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಎಂ.ಜಿ. ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 6,000ಕ್ಕೂ ಹೆಚ್ಚು ಸಿಬ್ಬಂದಿ ಕಣ್ಗಾವಲಿರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !