ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಲ್ಲೆಡೆ ಹೊಸ ವರ್ಷಾಚರಣೆ ಭರದ ಸಿದ್ಧತೆ ನಡೆಯುತ್ತಿದ್ದು, ಈ ಬೆನ್ನಲ್ಲೇ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ .