ಹೊಸದಿಂತ ಡಿಜಿಟಲ್ ಡೆಸ್ಕ್:
ನೀತಿ ಆಯೋಗದ ಮಾಜಿ ಅಧ್ಯಕ್ಷ ಅರವಿಂದ್ ಪನಗಾರಿಯಾ ಅವರನ್ನು 16ನೇ ಕೇಂದ್ರ ಹಣಕಾಸು ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ ಅವರು ಆಯೋಗದ ‘ಮುಂಗಡ ಕೋಶ’ದ ವಿಶೇಷ ಕರ್ತವ್ಯಾಧಿಕಾರಿಯಾಗಿರುತ್ತಾರೆ ಎಂದು ಸರ್ಕಾರ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.
2015 ರಿಂದ 2017ರವರೆಗೆ ಪನಗಾರಿಯಾ ಅವರು ನೀತಿ ಆಯೋಗದ ಅಧ್ಯಕ್ಷರಾಗಿದ್ದ ಅರವಿಂದ್ ಪನಗಾರಿಯಾ ಅವರು ಭಾರತ-ಅಮೆರಿಕನ್ ಪ್ರಮುಖ ಆರ್ಥಿಕ ತಜ್ಞ ಎಂದು ಗುರುತಿಸಿಕೊಂಡಿದ್ದಾರೆ.