ಪಟಾಕಿಗಳ ಅಬ್ಬರದ ಜೊತೆ ಹೊಸ ವರ್ಷವನ್ನು ಬರಮಾಡಿಕೊಂಡ ಆಸ್ಟ್ರೇಲಿಯಾದ ಜನತೆ!

ಹೊಸದಿಂತ ಡಿಜಿಟಲ್ ಡೆಸ್ಕ್:
 
2024 ರ ಹೊಸ ವರ್ಷ ಬರಮಾಡಿಕೊಳ್ಳಲು ವಿಶ್ವವೇ ಸಜ್ಜಾಗುತ್ತಿದ್ದು, ಈಗಾಗಲೇ ನ್ಯೂಜಿಲೆಂಡ್ ಆತ್ಮೀಯವಾಗಿ ಬರಮಾಡಿಕೊಂಡಿದ್ದು , ಆಸ್ಟ್ರೇಲಿಯಾವು ನೂತನ ವರ್ಷವನ್ನು ಸ್ವಾಗತಿಸಿದೆ .

ಆಸ್ಟ್ರೇಲಿಯಾದ ಸಿಡ್ನಿಯ ಒಪೆರಾ ಹೌಸ್ ಬಳಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಜನರು ಚಿತ್ತಾಕರ್ಷಕ ಬಾಣ ಬಿರುಸುಗಳನ್ನು ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು.

ಜಪಾನ್, ದಕ್ಷಿಣ ಕೊರಿಯಾ ಮತ್ತಿತರ ರಾಷ್ಟ್ರಗಳು ನೂತನ ವರ್ಷ ಬರಮಾಡಿಕೊಂಡು ಸಂಭ್ರಮಿಸಿದ್ದಾರೆ.

ಇತ್ತ ಭಾರತದಲ್ಲಿ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದ್ದು, ಪ್ರವಾಸಿ ತಾಣಗಳು, ಹೋಟೆಲ್, ರೆಸಾರ್ಟ್ ,ರೆಸ್ಟೊರೆಂಟ್ ಗಳು ವಿದ್ಯುತ್ ದೀಪಾಲಂಕಾರಗಳಿಂದ ಝಗಮಗಿಸುತ್ತಿದ್ದು, ಜನರಿಂದ ತುಂಬಿ ತುಳುಕುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!