ಹೊಸದಿಗಂತ ವರದಿ ಚಿಕ್ಕಮಗಳೂರು :
ಮೂಡಿಗೆರೆ ಬಿಇಒ ಕಚೇರಿಯ ವ್ಯವಸ್ಥಾಪಕ ನಿಂಗಾನಾಯಕ್(57) ಎಂಬುವವರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಸಿಬ್ಬಂದಿಗಳು ಕಚೇರಿ ಬಾಗಿಲು ತೆರೆದಾಗ ಶವ ಪತ್ತೆಯಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ. ಕಡೂರು ಮೂಲದ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ