ಸಿದ್ಧೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ದಿಗಂತ ವರದಿ ವಿಜಯಪುರ:

ನಗರದ ಜ್ಞಾನಯೋಗಾಶ್ರಮದಲ್ಲಿ ಮಂಗಳವಾರ ಹಮ್ಮಿಕೊಂಡ ಶತಮಾನ ಶ್ರೇಷ್ಠ ಸಂತ ಸಿದ್ಧೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ಕನ್ನೇರಿಮಠ ಅದೃಶ್ಯ ಕಾಡಸಿದ್ಧೇಶ್ವರ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಜವಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ, ಧಾರವಾಡ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಹಲವು ಗಣ್ಯರು, ಶ್ರೀಗಳು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!