ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ಗೆ (Rajanikanth) ಆಹ್ವಾನ ನೀಡಲಾಗಿದೆ.
ಮೋಹನ್ ಲಾಲ್, ಚಿರಂಜೀವಿ, ಕನ್ನಡದ ನಟ ಯಶ್ (Yash), ರಿಷಬ್ ಶೆಟ್ಟಿ (Rishab Shetty), ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.
ಇದೀಗರಾಮಮಂದಿರದ ಉದ್ಘಾಟನೆ ಸಂಭ್ರಮಕ್ಕೆ ಸಾಕ್ಷಿಯಾಗಲು ವಿಶೇಷವಾಗಿ ರಜನಿಕಾಂತ್ ಅವರಿಗೂ ಆಹ್ವಾನ ಸಿಕ್ಕಿದೆ. ಸದ್ಯ ಈ ಸುದ್ದಿ ಕೇಳಿ ತಲೈವಾ ಅಭಿಮಾನಿಗಳು ಖುಷಿಯಾಗಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದಕ್ಕಾಗಿ ಈಗಾಗಲೇ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ.