BIG BOSS | ದೊಡ್ಮನೆಯಲ್ಲಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್‌ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ವದಂತಿ ಎಲ್ಲೆಡೆ ವೈರಲ್ ಆಗಿದೆ.

ವದಂತಿ ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳು, ಪೋಷಕರು ಆತಂಕಕ್ಕೀಡಾಗಿದ್ದು, ಕಲರ‍್ಸ್ ಕನ್ನಡ ವಾಹಿನಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.

ಡ್ರೋನ್ ಪ್ರತಾಪ್ ಸೂಸೈಡ್ ಅಟೆಂಪ್ಟ್ ಮಾಡಿಲ್ಲ. ಎರಡು ದಿನದಿಂದ ಪ್ರತಾಪ್ ಸರಿಯಾಗಿ ಊಟ ಮಾಡಿರಲಿಲ್ಲ. ಫುಡ್ ಪಾಯಿಸನಿಂಗ್ ಆಗಿದೆ. ಅವರನ್ನು ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಆತಂಕ ಬೇಡ. ಮನೆಯಲ್ಲಿ ಸ್ಪರ್ಧಿಗಳ ಜೊತೆ ಗಲಾಟೆಯಾದ ನಂತರ ಡ್ರೋನ್ ಊಟ ಮಾಡಿರಲಿಲ್ಲ. ಬರೀ ಹೊಟ್ಟೆಗೆ ವಿಟಮಿನ್ ಮಾತ್ರೆಗಳನ್ನು ಸೇವಿಸುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!