ಮಧ್ಯಾಹ್ನದ ಶಾಲಾ ಊಟದಲ್ಲೂ ಸಿರಿಧಾನ್ಯ ಬಳಕೆ, ಸಿರಿಧಾನ್ಯ ಮೇಳ ಉದ್ಘಾಟಿಸಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಹಾಗೂ ಶಾಲಾ ಮಕ್ಕಳ ಮಧ್ಯಾಹ್ನದ ಊಟದಲ್ಲಿ ಸಿರಿಧಾನ್ಯಗಳನ್ನು ಬಳಸಲಾಗುವುದು. ಇದರಿಂದಾಗಿ ರಾಜ್ಯತೆ ಜನತೆ ಹಾಗೂ ಬೆಳೆಯುವ ಮಕ್ಕಳ ಆರೋಗ್ಯ ಇನ್ನಷ್ಟು ಸದೃಢವಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಸಿರಿಧಾನ್ಯ ಹಾಗೂ ಸಾವಯುವ ಹೆಚ್ಚು ಜನಪ್ರಿಯವಾಗಿದೆ. ಮಳೆ ಕಡಿಮೆ ಇದ್ದರೂ, ಅತಿ ಚಳಿ ಇದ್ದರೂ ಇವುಗಳನ್ನು ಬೆಳೆಯಬಹುದು. ಆರೋಗ್ಯಕ್ಕೂ ಒಳ್ಳೆಯದು. ಪ್ರತೀ ವರ್ಷವೂ ಮೇಳವನ್ನು ಆಯೋಜಿಸಲಾಗುತ್ತದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!