ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ರಾಮಮಂದಿರ (Ram Mandir) ಹಾಗೂ ಬಾಬ್ರಿ ಮಸೀದಿ (Babri Masjid) ಜಮೀನು ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ವಾದಿಯಾಗಿದ್ದ ಇಕ್ಬಾಲ್ ಅನ್ಸಾರಿಗೂ (Iqbal Ansari) ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ಇಕ್ಬಾಲ್ ಅನ್ಸಾರಿ ಅವರು ಬಾಬ್ರಿ ಮಸೀದಿಯ ಪ್ರಮುಖ ಬೆಂಬಲಿಗರಾಗಿದ್ದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ ಈಗ ಇಕ್ಬಾಲ್ ಅನ್ಸಾರಿಗೆ ಆಹ್ವಾನ ನೀಡಲಾಗಿದೆ.
ಡಿಸೆಂಬರ್ 30 ರಂದು ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪುನರಾಭಿವೃದ್ಧಿ ಮಾಡಿದ ರೈಲ್ವೆ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಅಲ್ಲದೇ ಉತ್ತರ ಪ್ರದೇಶದಲ್ಲಿ ಇತರ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಈ ಸಂದರ್ಭ ಮೋದಿ ಅವರನ್ನು ಸ್ವಾಗತಿಸಿದ್ದ ಜನರಲ್ಲಿ ಅನ್ಸಾರಿ ಕೂಡ ಸೇರಿದ್ದರು.
ರೋಡ್ ಶೋ ವೇಳೆ ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಠಿ ಮಾಡಿ ಗಮನ ಸೆಳೆದಿದ್ದರು ಅನ್ಸಾರಿ. ಈಗ ಅವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ.