ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಪರಿಹಾರ ಬಿಡುಗಡೆ: ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಗಾರು ಹಂಗಾಮಿನ ಬೆಳೆ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ಬರ ನಿರ್ವಹಣೆ ಕೈಪಿಡಿ 2020 ರನ್ವಯ, ಜೂನ್ 1 ರಿಂದ ಆಗಸ್ಟ್ 19 ರವರೆಗಿನ ಅವಧಿಗೆ ಎಲ್ಲಾ ಮಾನದಂಡಗಳನ್ನು ವಿಶ್ಲೇಷಿಸಿ 195 ತಾಲ್ಲೂಕುಗಳನ್ನು ಬರ ಪರಿಸ್ಥಿತಿ ಕಂಡುಬಂದಿರುವ ತಾಲ್ಲೂಕುಗಳೆಂದು ಗುರುತಿಸಿ ಬೆಳೆ ಸಮೀಕ್ಷೆ ದೃಢೀಕರಣ (GT) ಕೈಗೊಂಡು 195 ತಾಲ್ಲೂಕುಗಳನ್ನು ಮೇಲೆ ಒದಲಾದ (1)ರ ಸರ್ಕಾರಿ ಆದೇಶ ದಿನಾಂಕ:13-9-2023ರಂದು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.

ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯನುಸಾರ ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್ಗೆ ಸೀಮಿತಗೊಳಿಸಿ ಈ ಕೆಳಕಂಡ ದರದಲ್ಲಿ ಇನ್ಪುಟ್ ಸಬ್ಸಿಡಿ ನಿಗಧಿಪಡಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿದೆ .
ರಾಜ್ಯ ಸರ್ಕಾರವು 105 ಕೋಟಿಯನ್ನು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿದೆ.

ಪ್ರತಿ ರೈತರಿಗೆ ಗರಿಷ್ಠ 2000ರವರೆಗೆ ರೈತರಿಗೆ ಪಾವತಿಸಲು 2023-24ನೇ ಸಾಲಿನ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!