ಹೊಸದಿಗಂತ ವರದಿ,ವಿಜಯಪುರ:
ವಿಜಯಪುರ ಮೂಲದ ನವೀನ್ ಹಾವಣ್ಣನವರ ಅಮೆರಿಕಾದಲ್ಲಿ ಕೌನ್ಸಿಲರ್ ಆಯ್ಕೆ ಆಗಿದ್ದಾರೆ.
ಅಮೆರಿಕಾದ ನ್ಯೂಯಾರ್ಕ್ ರಾಜ್ಯದ ರೋಚೆಸ್ಟರ್ ಜಿಲ್ಲೆಯ ಪೀಟ್ಸ್ ಪೋರ್ಡ್ ಪ್ರದೇಶದ ಕೌನ್ಸಿಲರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ನವೀನ ಸ್ಪರ್ಧೆ ಮಾಡಿದ್ದರು. ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಎದುರು 33 ಮತಗಳ ಅಂತರಿಂದ ನವೀನ ಗೆಲುವು ಸಾಧಿಸಿದ್ದಾರೆ. ಕಳೆದ 14 ವರ್ಷಳಿಂದ ಅಮೆರಿಕಾದಲ್ಲಿಯೇ ವಾಸವಾಗಿದ್ದಾರೆ. ಪತ್ನಿ ಕ್ಯಾಥರಿನ್ ಹಾಗೂ ಇಬ್ಬರು ಮಕ್ಕಳೊಂದಿಗೆ ಅಮೆರಿಕಾದಲ್ಲಿದ್ದಾರೆ. ಅಲ್ಲದೇ
ವಿಜಯಪುರದಲ್ಲಿಯೇ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಶಿಕ್ಷಣ, ಹಾಸನದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯು ಶಿಕ್ಷಣ, ಕಲಬುರಗಿಯ ಶರಣ ಬಸವೇಶ್ವರ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದುಕೊಂಡು
ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ. 2009-10 ರಲ್ಲಿ ಅಮೆರಿಕಾಕ್ಕೆ ತೆರಳಿದರು.
ಅಮೆರಿಕಾದಲ್ಲಿ ಸಾಪ್ಟವೇರ್ ಎಂಜೀನಿಯರ್ ಆಗಿ ಕೆಲಸ ಮಾಡಿದ್ದಾರೆ.