ಐಸಿಸಿ ಟಿ20 ವಿಶ್ವಕಪ್ ವೇಳಾಪಟ್ಟಿ ರಿಲೀಸ್: ಭಾರತ- ಪಾಕ್ ಪಂದ್ಯಕ್ಕೆ ಅಖಾಡ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಐಸಿಸಿ ಟಿ20 ವಿಶ್ವಕಪ್​ಗೆ ಭರ್ಜರಿ ತಯಾರಿ ನಡೆಯುತ್ತಿದ್ದು, ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯವಹಿಸುತ್ತಿವೆ.
ಈಗಾಗಲೇ ಈ ವಿಶ್ವಸಮರಕ್ಕೆ 20 ತಂಡಗಳನ್ನು ಸಹ ಅಧಿಕೃತಗೊಳಿಸಲಾಗಿದೆ. ಈ ನಡುವೆ ಐಸಿಸಿ ವೇಳಾಪಟ್ಟಿಯನ್ನು ಸಹ ಇಂದು ಬಿಡುಗಡೆಗೊಳಿಸಿದೆ.

ವೇಳಾಪಟ್ಟಿಯ ಪ್ರಕಾರ ಜೂನ್ 1 ರಿಂದ ಆರಂಭವಾಗಲಿರುವ ಟೂರ್ನಿ ಜೂನ್ 29 ರಂದು ಮುಕ್ತಾಯವಾಗಲಿದೆ. ಅಂದರೆ ಟಿ20 ವಿಶ್ವಕಪ್​ನ ಫೈನಲ್ ಪಂದ್ಯ ಜೂನ್ 29 ರಂದು ನಡೆಯಲಿದೆ. ಉದ್ಘಾಟನಾ ಪಂದ್ಯ ಆತಿಥೇಯ ಯುಎಸ್​ಎ ಹಾಗೂ ಕೆನಡಾ ನಡುವೆ ನಡೆದರೆ, ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ.

ಎ ಗುಂಪಿನಲ್ಲಿ ಟೀಂ ಇಂಡಿಯಾ
ಟೀಂ ಇಂಡಿಯಾ ಎ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತವನ್ನು ಹೊರತುಪಡಿಸಿ ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಆತಿಥೇಯ ಯುಎಸ್​ಎ ಕೂಡ ಈ ಗುಂಪಿನಲ್ಲಿ ಸ್ಥಾನ ಪಡೆದಿವೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 05 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ನ್ಯೂಯಾರ್ಕ್‌ನಲ್ಲಿ ನಡೆಯಲಿದೆ. ಈ ಪಂದ್ಯದ ನಂತರ, ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ವಿಶ್ವಕಪ್‌ನ ಅತಿದೊಡ್ಡ ಪಂದ್ಯ ನಡೆಯಲಿದೆ. ಅಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಭಾರತ ತನ್ನ ಮೂರನೇ ಗುಂಪು ಹಂತದ ಪಂದ್ಯವನ್ನು ಅಮೆರಿಕ ವಿರುದ್ಧ ಜೂನ್ 12 ರಂದು ನ್ಯೂಯಾರ್ಕ್‌ನಲ್ಲಿ ಮತ್ತು ನಾಲ್ಕನೇ ಲೀಗ್ ಪಂದ್ಯವನ್ನು ಕೆನಡಾ ವಿರುದ್ಧ ಜೂನ್ 15 ರಂದು ಫ್ಲೋರಿಡಾದಲ್ಲಿ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಯುಎಸ್​ಎನಲ್ಲೇ ಆಡಲಿದ್ದು, ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಯುಎಸ್‌ಎನಲ್ಲಿ ಆಡಲಿದೆ.

ಟೀಂ ಇಂಡಿಯಾದ ವೇಳಾಪಟ್ಟಿ (ಗುಂಪು ಹಂತ)
ಜೂನ್ 5 – ಭಾರತ vs ಐರ್ಲೆಂಡ್, ನ್ಯೂಯಾರ್ಕ್
ಜೂನ್ 9- ಭಾರತ vs ಪಾಕಿಸ್ತಾನ, ನ್ಯೂಯಾರ್ಕ್
ಜೂನ್ 12- ಭಾರತ vs ಯುಎಸ್​ಎ, ನ್ಯೂಯಾರ್ಕ್
ಜೂನ್ 15- ಭಾರತ vs ಕೆನಡಾ, ಫ್ಲೋರಿಡಾ

ಯಾವ ಗುಂಪಿನಲ್ಲಿ ಯಾವ ತಂಡವಿದೆ?
ಗುಂಪು ಎ- ಭಾರತ, ಪಾಕಿಸ್ತಾನ, ಐರ್ಲೆಂಡ್, ಕೆನಡಾ, ಯುಎಸ್​ಎ.
ಗುಂಪು ಬಿ- ಇಂಗ್ಲೆಂಡ್, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್ಲೆಂಡ್, ಓಮನ್.
ಗುಂಪು ಸಿ- ನ್ಯೂಜಿಲೆಂಡ್, ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್, ಉಗಾಂಡಾ, ಪಿಎನ್​ಜಿ.
ಗುಂಪು ಡಿ- ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ನೆದರ್ಲ್ಯಾಂಡ್ಸ್, ಶ್ರೀಲಂಕಾ, ನೇಪಾಳ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!