ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ (Rajasthan) ನೂತನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ (Bhajan Lal Sharma) ಅವರು ಸಚಿವ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.
ಗೃಹ ಸೇರಿದಂತೆ ಎಂಟು ಖಾತೆಗಳ ಜವಾಬ್ದಾರಿಯನ್ನುಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ವಹಿಸಿಕೊಂಡಿದ್ದಾರೆ .
ಜೈಪುರದ ಹಿಂದಿನ ರಾಜಮನೆತನಕ್ಕೆ ಸೇರಿದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಅವರಿಗೆ ಹಣಕಾಸು ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಆರು ಇಲಾಖೆಗಳು ಮತ್ತು ಉಪ ಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಅವರಿಗೆ ಉನ್ನತ ಶಿಕ್ಷಣ ಇಲಾಖೆ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸೇರಿದಂತೆ ನಾಲ್ಕು ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಕ್ಯಾಬಿನೆಟ್ ಸಚಿವ ಕಿರೋಡಿ ಲಾಲ್ ಮೀನಾ ಅವರಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ, ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಕೈಗಾರಿಕೆ ಮತ್ತು ವಾಣಿಜ್ಯ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಗಿದೆ.
ಗಜೇಂದ್ರ ಸಿಂಗ್ ಖಿಮ್ಸರ್ ಅವರಿಗೆ ವೈದ್ಯಕೀಯ ಆರೋಗ್ಯ ಮತ್ತು ವಿಜ್ಞಾನ (ಇಎಸ್ಐ) ಮತ್ತು ಮದನ್ ದಿಲಾವರ್ ಶಿಕ್ಷಣ ( ಪ್ರಾಥಮಿಕ ಮತ್ತು ಪ್ರೌಢ), ಸಂಸ್ಕೃತ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವರ ಖಾತೆ ನೀಡಲಾಗಿದೆ.