ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಾಲ್ಕು ಆಟಗಾರರನ್ನು ನಾಮನಿರ್ದೇಶನ ಮಾಡಿದೆ. ಈ ನಾಲ್ಕು ಹೆಸರುಗಳಲ್ಲಿ ಇಬ್ಬರು ಭಾರತೀಯ ಆಟಗಾರರ ಹೆಸರಿದೆ. ಉಳಿದಿರುವ ಇಬ್ಬರು ಆಟಗಾರರು ಆಸ್ಟ್ರೇಲಿಯಾ ತಂಡವರಾಗಿದ್ದಾರೆ.
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಹೊರತಾಗಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ಹೆಸರೂ ಸೇರಿದೆ. ಇವರಿಬ್ಬರನ್ನು ಹೊರತುಪಡಿಸಿ, ಇಬ್ಬರು ಆಸ್ಟ್ರೇಲಿಯಾದ ಆಟಗಾರರು ಈ ಪಟ್ಟಿಯ ಸ್ಥಾನ ಪಡೆದಿದ್ದಾರೆ. ಅವರಲ್ಲಿ ವಿಶ್ವಕಪ್ ಫೈನಲ್ ಹೀರೋ ಟ್ರಾವಿಸ್ ಹೆಡ್ ಮತ್ತು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಸೇರಿದ್ದಾರೆ.
ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿಗೆ ಈ ವರ್ಷ ಅದ್ಭುತವಾಗಿತ್ತು. 2023 ರಲ್ಲಿ ಅವರು ಏಕದಿನ ಮತ್ತು ಟೆಸ್ಟ್‌ನಲ್ಲಿ ಕೊಹ್ಲಿ ಒಟ್ಟು 35 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 66.06 ಸರಾಸರಿಯಲ್ಲಿ 2048 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ವಿರಾಟ್ ಕೊಹ್ಲಿ 8 ಶತಕ ಮತ್ತು 10 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.
ರವೀಂದ್ರ ಜಡೇಜಾ ಕೂಡ 2023 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಟ್ಟು 35 ಪಂದ್ಯಗಳನ್ನಾಡಿರುವ ಜಡೇಜಾ ಬ್ಯಾಟಿಂಗ್ನಿಂದ 613 ರನ್ ಕಲೆಹಾಕಿದ್ದರೆ, ಬೌಲಿಂಗ್ನಲ್ಲಿ 66 ವಿಕೆಟ್ ಪಡೆದಿದ್ದಾರೆ. ಅಲ್ಲದೆ 2023ರಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ.
ವಿರಾಟ್ ಕೊಹ್ಲಿ ಹೊರತಾಗಿ, ರವೀಂದ್ರ ಜಡೇಜಾ ಕೂಡ 2023 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಒಟ್ಟು 35 ಪಂದ್ಯಗಳನ್ನಾಡಿರುವ ಜಡೇಜಾ ಬ್ಯಾಟಿಂಗ್ನಿಂದ 613 ರನ್ ಕಲೆಹಾಕಿದ್ದರೆ, ಬೌಲಿಂಗ್ನಲ್ಲಿ 66 ವಿಕೆಟ್ ಪಡೆದಿದ್ದಾರೆ. ಅಲ್ಲದೆ 2023ರಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಕೂಡ ಆಗಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಟ್ರಾವಿಸ್ ಹೆಡ್ ಮತ್ತು ನಾಯಕ ಪೀಟ್ ಕಮ್ಮಿನ್ಸ್‌ಗೆ 2023 ವರ್ಷ ಅದ್ಭುತವಾಗಿತ್ತು. ಇಬ್ಬರೂ ಆಟಗಾರರು 2023 ರಲ್ಲಿ ಆಡಿದ ಎರಡೂ ಐಸಿಸಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಎರಡೂ ಟೂರ್ನಿಗಳ ಅಂತಿಮ ಪಂದ್ಯಗಳಲ್ಲಿ ಈ ಇಬ್ಬರು ಆಟಗಾರರ ಪ್ರದರ್ಶನ ಅತ್ಯುತ್ತಮವಾಗಿತ್ತು.
ಟ್ರಾವಿಸ್ ಹೆಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು ವಿಶ್ವಕಪ್ ಫೈನಲ್ ಪಂದ್ಯಗಳಲ್ಲಿ ಗೆಲುವಿನ ಶತಕ ಸಿಡಿಸಿದ್ದರು. ಇತ್ತ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡ ಈ ಎರಡೂ ಟ್ರೋಫಿಗಳನ್ನು ಗೆದ್ದುಕೊಂಡಿತು. ಈ ಕಾರಣಕ್ಕಾಗಿಯೇ ಐಸಿಸಿ ಈ ಇಬ್ಬರು ಆಟಗಾರರ ಹೆಸರನ್ನು ಈ ಪಟ್ಟಿಯಲ್ಲಿ ಸೇರಿಸಿದೆ.