ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಿನ್ನೆಯಷ್ಟೇ ವಿಶ್ವೇಶ್ವರಯ್ಯ ಮ್ಯೂಸಿಯಂನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿತ್ತು. ಇದೀಗ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ( National stock exchange of India) ಬಾಂಬ್ ಬೆದರಿಕೆ ಕರೆ ಬಂದಿದೆ.
ಆರೋಪಿಗಳು ಕರೆ ಮಾಡಿ ರಾಷ್ಟ್ರೀಯ ಷೇರು ಕೇಂದ್ರದ ಬೆಂಗಳೂರಿನ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದರು. ಮುಂಬೈ ಪೊಲೀಸರು ತಕ್ಷಣವೇ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತಕ್ಷಣವೇ ಬಾಂಬ್ ನಿಷ್ಟ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ಅಥವಾ ಇನ್ಯಾವುದೇ ಅನುಮಾನ ಮೂಡುವಂಥ ವಸ್ತು ಎಲ್ಲಿಯೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.