ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳು, ಶಿಕ್ಷಕರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿಯವರ ಸಂವಾದ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ 7ನೇ ಆವೃತ್ತಿಗೆ ದಿನ ನಿಗದಿಯಾಗಿದೆ.
ಕೇಂದ್ರ ಶಿಕ್ಷಣ ಸಚಿವಾಲಯ ಈ ಬಗ್ಗೆ ಮಾಹಿತಿ ಬಿಡುಗಡೆಗೊಳಿಸಿದ್ದು, ಜ.29 ರಂದು ಈ ಕಾರ್ಯಕ್ರಮ ನಡೆಯಲಿದೆ. ಈ ಬಾರಿಯ ಕಾರ್ಯಕ್ರಮವನ್ನು ದಿಲ್ಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಇದರಲ್ಲಿ ಉಪಸ್ಥಿತರಿರುವ ಸಾಧ್ಯತೆ ಇದೆ.
ಪ್ರತೀ ರಾಜ್ಯ, ಕೇಂದ್ರಾಡಳಿತ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳು, ಒಬ್ಬ ಶಿಕ್ಷಕರು ಮತ್ತು ಕಲಾ ಉತ್ಸವ ಮತ್ತು ವೀರ ಗಾಥಾ ಸ್ಪರ್ಧೆಯ ವಿಜೇತರನ್ನು ಮುಖ್ಯ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈಗಾಗಲೇ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಸೇರಿ ಒಟ್ಟು 1 ಕೊಟಿ ಜನ ನೋಂದಣಿ ಮಾಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.