ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ಸರ್ಕಾರ ಈಗಾಗಲೇ ಹೇಳಿದೆ.
ಇದೀಗ ಕನ್ನಡಕ್ಕೆ ಆದ್ಯತೆ ನೀಡುವ ಫಲಕಗಳು ಹಾಗೂ ಜಾಹೀರಾತುಗಳಲ್ಲಿಯೂ ಕನ್ನಡ ಬಳಸುವುದನ್ನ ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಮಾಡಿದೆ.
ಫೆ. 28ರ ಒಳಗಾಗಿ ರಾಜ್ಯದ ಎಲ್ಲಾ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಬೇಕು. ಶೇ.40ರಷ್ಟು ಬೇರೆ ಭಾಷೆಗಳನ್ನು ಬಳಕೆ ಮಾಡಬೇಕು. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.