ಬಾಂಗ್ಲಾದೇಶದಲ್ಲಿ ನಾಳೆ ಸಾರ್ವತ್ರಿಕ ಚುನಾವಣೆ: ಸತತ ನಾಲ್ಕನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿ ಪಿಎಂ ಹಸೀನಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದಲ್ಲಿ ಭಾನುವಾರ (ನಾಳೆ) ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಚುನಾವಣೆಯಲ್ಲಿ ಒಟ್ಟು 11.96 ಕೋಟಿ ನೋಂದಾಯಿತ ಮತದಾರರು 42 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತ ಚಲಾಯಿಸಲಿದ್ದಾರೆ.27 ರಾಜಕೀಯ ಪಕ್ಷಗಳಿಂದ 1,500ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು 436 ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಬಿಗಿ ಭದ್ರತೆಯಲ್ಲಿ ನಡೆಯುತ್ತಿರುವ 12ನೇ ಸಾರ್ವತ್ರಿಕ ಚುನಾವಣೆಯ ಮೇಲ್ವಿಚಾರಣೆಯನ್ನು ಭಾರತದ ಮೂವರು ಸೇರಿದಂತೆ 100ಕ್ಕೂ ಹೆಚ್ಚು ವಿದೇಶಿ ವೀಕ್ಷಕರು ನೋಡಿಕೊಳ್ಳಲಿದ್ದಾರೆ.

ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜನವರಿ 8ರಂದು ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!