ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡಗೆ ಜಾಮೀನು ಮಂಜೂರು ಮಾಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿನ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಕನ್ನಡ ಭಾಷೆಗಾಗಿ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದರು.ಸಂಸ್ಥೆ , ಹೋಟೆಲ್ ಹಾಗೂ ಕಟ್ಟಡಗಳಲ್ಲಿ ಕನ್ನಡ ನಾಮಫಲಕ ಇಲ್ಲದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬೋರ್ಡ್ ಧ್ವಂಸಗೊಳಿಸಿದ್ದರು.
ಹುಣಸಮಾರಹಳ್ಳಿಯಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ನಂತರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಆದೇಶ ಹೊರಡಿಸಿದೆ.