ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮಮಂದಿರ (Ayodhya Ram Mandir) ಉದ್ಘಾಟನೆ ಸಂದರ್ಭ ರಾಜ್ಯದ ನೂರಾರು ದೇವಾಲಯಗಳಲ್ಲಿಯೂ (Temples) ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ.
ಬೆಂಗಳೂರಿನಲ್ಲಿ (Bengaluru) ಮುಜರಾಯಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವ ರಾಮಲಿಂಗಾ ರೆಡ್ಡಿ, ಜನವರಿ 22ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಅದೇ ಸಮಯಕ್ಕೆ ಸರಿಯಾಗಿ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನೇರವೇರಿಸುವ ಮೂಲಕ ವಿಶೇಷ ಗೌರವ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ .
ಸೋಮವಾರ (ಜ.8) ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ.
ಅಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್‌ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳರತಿ ನೆರವೇರಲಿದೆ. ಅಲ್ಲದೇ ದೇಶಕ್ಕೆ ಮತ್ತು ರಾಜ್ಯಕ್ಕೆ ಶ್ರೀ ರಾಮನ ರಕ್ಷಣೆ ಇರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ.