ಶ್ರೀರಾಮನ ಮಂದಿರ ಲೋಕಾರ್ಪಣೆ ದಿನ ಬೆಳಗಲಿವೆ ಇಲ್ಲಿ ಬರೋಬ್ಬರಿ 1.11 ಕೋಟಿ ದೀಪಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಸಂದರ್ಭ ಮಧ್ಯಪ್ರದೇಶದ ಇಂದೋರ್ ನಗರವು ಬರೋಬ್ಬರಿ 1.11 ಕೋಟಿ ದೀಪಗಳೊಂದಿಗೆ ಬೆಳಗಲಿದೆ!
ಈ ಮಾಹಿತಿಯನ್ನು ಸಚಿವ ಕೈಲಾಶ್ ವಿಜಯವರ್ಗಿಯ ತಿಳಿಸಿದ್ದಾರೆ. ಅಂದು ರಾಜ್ಯದ ಪ್ರತಿ ಮನೆಗಳಲ್ಲಿ ದೀಪಗಳನ್ನು ಬೆಳಗಿಸಲಾಗುವುದು. ಈ ಮೂಲಕ ರಾಮಲಲಾ ಪ್ರಾಣಪ್ರತಿಷ್ಠೆ ಕ್ಷಣಗಳನ್ನು ಇನ್ನಷ್ಟು ಸ್ಮರಣೀಯಗೊಳಿಸಲಾಗುವುದು ಎಮದು ಅವರು ತಿಳಿಸಿದ್ದಾರೆ.
ಇದಲ್ಲದೆ,ಅಂಸು ಶ್ರೀರಾಮ ಮತ್ತು ಅಯೋಧ್ಯೆಯ ರಾಮ ಮಂದಿರದ ವಿಷಯದ ಕುರಿತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಸ್ಪರ್ಧೆಯಲ್ಲಿ ಸುಮಾರು ೩೧,೦೦೦ ಶಾಲಾ ಮಕ್ಕಳು ಭಾಗವಹಿಸಲಿದ್ದಾರೆ. ಈ ಮೂಲಕ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನ ನಡೆಯಲಿದೆ ಎಂದೂ ಅವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!