ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ರಾಮಮಂದಿರ ಉದ್ಘಾಟನೆ ವೇಳೆ ದೇಶದ ಎಲ್ಲೆಡೆ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡುತ್ತಿದ್ದರೆ ಕಾಂಗ್ರೆಸ್ ಮಾತ್ರ ಅಲ್ಪಸಂಖ್ಯಾತರ ಓಲೈಕೆ, ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸದಲ್ಲಿ ನಿರತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಶಕಾಲೇ ವಿಪರೀತ ಬುದ್ಧಿ ಅನ್ನುವ ಮಾತಿದೆ. ಕಾಂಗ್ರೆಸ್ ಅದೇ ಮಾದರಿಯಲ್ಲಿ ವರ್ತಿಸುತ್ತಿದೆ. ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವುದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ಎಚ್ಚರಿಕೆಯ ಮಾತು ಹೇಳಿದರು.
ಡಿಜೆಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ಅಪಾಯಕರ ರಕ್ಷಣೆ ಕುರಿತ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಲ್ಪಸಂಖ್ಯಾತರಿಂದಲೇ ತಾವು ಅಧಿಕಾರಕ್ಕೆ ಬಂದಿರುವ ಭಾವನೆ ಕಾಂಗ್ರೆಸ್‌ನಲ್ಲಿದೆ. ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದ ದೇಶದ್ರೋಹಿಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಹೀಗೆಯೇ ಬೇರೆ ಬೇರೆ ದೇಶದ್ರೋಹಿಗಳಿಗೂ ರಕ್ಷಣೆ ಮಾಡ್ತೀರಾ? ಎಂದು ಕಾಂಗ್ರೆಸ್‌ಗೆ ಪ್ರಶ್ನೆ ಎಸೆದಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ