ಪ್ರೊ ಕಬಡ್ಡಿ ಲೀಗ್‌ನಲ್ಲಿ ಬಚ್ಚನ್​ ಫ್ಯಾಮಿಲಿ ಪ್ರತ್ಯಕ್ಷ: ಬಿ-ಟೌನ್​ನಲ್ಲಿ ಈಗ ಶುರುವಾಗಿದೆ ಕನ್ಫ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಹಲವು ದಿನಗಳಿಂದ ಬಾಲಿವುಡ್ ಬಿ-ಟೌನ್​ನಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ, ನಟಿ ಐಶ್ವರ್ಯ ರೈ ಮತ್ತು ಅಭಿಷೇಕ್​ ಬಚ್ಚನ್​ ಅವರ ವಿಚ್ಛೇದನದ ಸುದ್ದಿ.

‘ಅಭಿಷೇಕ್ ಅವರು ತಮ್ಮ ಇತ್ತೀಚಿನ ಸಂದರ್ಶನಗಳಲ್ಲಿ ತಮ್ಮ ಮದುವೆಯ ಉಂಗುರವನ್ನು ಧರಿಸುತ್ತಿಲ್ಲ, ಇಲ್ಲಿಯವರೆಗೆ ಅವರು ಯಾವಾಗಲೂ ಅದನ್ನು ಧರಿಸುತ್ತಿದ್ದರು. ಹೀಗಾಗಿ ಅಭಿಷೇಕ್ ಹಾಗೂ ಐಶ್ವರ್ಯಾ ಸಪರೇಟ್‌ ಆಗುತ್ತಾರೆ ಎಂಬುದು ನಿಜವೆಂದು ತೋರುತ್ತಿದೆ’ ಎಂದು ಸುದ್ದಿಯಾಗಿತ್ತು.

ಇದಾದ ಬಳಿಕ ಐಶ್ವರ್ಯ ಮಾವ ಅಮಿತಾಭ್​ ಬಚ್ಚನ್​ ಕೂಡ ಇದಕ್ಕೆ ಸ್ಪಷ್ಟವಾಗಿ ಉತ್ತರ ನೀಡದೇ, ಅಡ್ಡಗೋಡೆ ಮೇಲೆ ದೀಪ ಇಟ್ಟವರಂತೆ ಹಾರಿಕೆ ಉತ್ತರ ಕೊಟ್ಟಿರುವುದು ಕೂಡ ಈ ವಿಚ್ಛೇದನದ ಸುದ್ದಿ ನಿಜ ಎಂದೇ ಹೇಳಲಾಗುತ್ತಿದೆ.

ಇದರ ಬಳಿಕ ಸಾಲದು ಎಂಬಂತೆ, ನಾನು ಹಾಗೂ ಪತ್ನಿ ಐಶ್ವರ್ಯಾ ಪೋಷಕರೊಂದಿಗೆ ಜೊತೆಯಾಗಿ ವಾಸ ಮಾಡುತ್ತಿಲ್ಲ ಎಂದು ಅಭಿಷೇಕ್ ಬಚ್ಚನ್ ಹೇಳಿರುವ ವೀಡಿಯೋವೊಂದು ವೈರಲ್ ಆಗಿತ್ತು. ಕೆಲ ದಿನಗಳ ಹಿಂದಷ್ಟೇ ಐಶ್ವರ್ಯಾ ಅವರು ತಮ್ಮ ಅತ್ತೆ ಮಾವನ ಮನೆ ಜಲ್ಸಾದಿಂದ ಹೊರಬಂದು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದಾರೆ ಎಂದು ವರದಿ ಆದ ಬೆನ್ನಲ್ಲೇ ಈ ವಿಡಿಯೋ ಕೆಲ ದಿನಗಳ ಹಿಂದೆ ವೈರಲ್​ ಆಗಿತ್ತು.

ಆದರೆ ಇದೀಗ ಕುತೂಹಲದ ಸಂಗತಿ ಎಂದರೆ, ಮುಂಬೈನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್‌ನಲ್ಲಿ ಅಭಿಷೇಕ್ ಬಚ್ಚನ್, ಐಶ್ವರ್ಯ ರೈ, ಆರಾಧ್ಯ ಬಚ್ಚನ್​ ಸೇರಿದಂತೆ ಅಮಿತಾಭ್​ ಬಚ್ಚನ್ ಕೂಡ ಒಟ್ಟಿಗೇ ಕಾಣಿಸಿಕೊಂಡಿದ್ದು, ಅಭಿಮಾನಿಗಳು ತಲೆ ಕೆರೆದುಕೊಳ್ಳುವಂತಾಗಿದೆ.

ಅಭಿಷೇಕ್ ಅವರ ಕಬಡ್ಡಿ ತಂಡ ಜೈಪುರ ಪಿಂಕ್ ಪ್ಯಾಂಥರ್ಸ್ ಅನ್ನು ಹುರಿದುಂಬಿಸಲು ಮತ್ತು ಬೆಂಬಲಿಸಲು ಬಚ್ಚನ್​ ಫ್ಯಾಮಿಲಿ ಬಂದಿತ್ತು. ಕುಟುಂಬಸ್ಥರು ತಂಡವನ್ನು ಹುರಿದುಂಬಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ನೋಡಿದ ನೆಟ್ಟಿಗರು ಹಾಗಿದ್ದರೆ ಎಲ್ಲವೂ ಸರಿಯಿದೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಿದ್ದರೆ ಇಷ್ಟು ದಿನ ನಡೆದದ್ದು ನಿಜವೋ, ಇದು ನಿಜವೋ ಒಂದೂ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಪಂದ್ಯಾವಳಿಯಲ್ಲಿ ಅಭಿಷೇಕ್ ಅವರ ಕಬಡ್ಡಿ ತಂಡವನ್ನು ಐಶ್ವರ್ಯಾ, ಆರಾಧ್ಯ ಮತ್ತು ಅಮಿತಾಭ್​ ಬಚ್ಚನ್ ಕೂಗುತ್ತಾ ಹುರಿದುಂಬಿಸುತ್ತಿರುವುದನ್ನು ನೋಡಿದರೆ ಎಲ್ಲವೂ ಸರಿಯಾದಂತಿದೆ ಎನ್ನುತ್ತಿದ್ದಾರೆ ಫ್ಯಾನ್ಸ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!