ಲೋಕಸಭಾ ಚುನಾವಣೆ: ಬಿಹಾರದ ಚಂಪಾರಣ್‌ ದಿಂದ ಪ್ರಧಾನಿ ಮೋದಿ ರ‍್ಯಾಲಿ ಶುರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಲೋಕಸಭಾ ಚುನಾವಣೆಯ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಜನವರಿ 13 ರಂದು ಬಿಹಾರದ ಚಂಪಾರಣ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ಮೂಲಕ ಪ್ರಚಾರ ಆರಂಭಿಸುತ್ತಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಚಂಪಾರಣ್‌ನ ಬೆಟ್ಟಿಯಾ ನಗರದ ರಾಮನ್ ಮೈದಾನದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಬಿಹಾರದಾದ್ಯಂತ ರಸ್ತೆ ಮತ್ತು ಸೇತುವೆಗಳು ಸೇರಿದಂತೆ ವಿವಿಧ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಹಾರದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಗೆಲುವಿನ ಗುರಿ ಹೊಂದಿರುವ ಬಿಜೆಪಿ, ವ್ಯಾಪಕ ಯೋಜನೆಗಳನ್ನು ರೂಪಿಸಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಜನವರಿ ಮತ್ತು ಫೆಬ್ರವರಿಯಲ್ಲಿ ಬಿಹಾರದಲ್ಲಿ ಹಲವಾರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಜನವರಿ 15 ರ ನಂತರ ಪ್ರಮುಖ ರ‍್ಯಾಲಿಗಳನ್ನು ನಿರೀಕ್ಷಿಸಲಾಗಿದ್ದು, ಮೋದಿ ರಾಜ್ಯದ ಬೇಗುಸರೈ, ಬೆಟ್ಟಿಯಾ ಮತ್ತು ಔರಂಗಾಬಾದ್‌ನಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗೆ, ಅಮಿತ್ ಶಾ ಜನವರಿ ಮತ್ತು ಫೆಬ್ರವರಿಯಲ್ಲಿ ಸೀತಾಮರ್ಹಿ, ಮಾಧೇಪುರ ಮತ್ತು ನಳಂದಾದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಅದೇ ರೀತಿ, ಜೆ.ಪಿ ನಡ್ಡಾ ಹಲವಾರು ಸ್ಥಳಗಳಲ್ಲಿ, ವಿಶೇಷವಾಗಿ ಸೀಮಾಂಚಲ್ ಮತ್ತು ಬಿಹಾರದ ಪೂರ್ವ ಪ್ರದೇಶಗಳಲ್ಲಿ ರ್ಯಾಲಿಗಳನ್ನು ನಡೆಸಬಹುದು ಎನ್ನಲಾಗುತ್ತಿದೆ. .

ಬಿಹಾರದಲ್ಲಿ ಸದ್ಯ ಬಿಜೆಪಿ ವಿರೋಧ ಪಕ್ಷದಲ್ಲಿದ್ದು, ಜೆಡಿಯು ಮಹಾಘಟಬಂಧನ್ ಸರ್ಕಾರದ ಭಾಗವಾಗಿದೆ. ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಂತರ ವಿರೋಧ ಪಕ್ಷದ ನಾಯಕರನ್ನು ಯಶಸ್ವಿಯಾಗಿ ಒಗ್ಗೂಡಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಎನ್‌ಡಿಎ 39 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ ಒಂದು ಸೀಟು ಗೆದ್ದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!