ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ (BY Vijayendra) ನೇತೃತ್ವದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದರು.
ಲೋಕಸಭಾ ಚುನಾವಣಾ ತಯಾರಿ ನಡೆಯುತ್ತಿದೆ. ಎಲ್ಲಾ ಲೋಕಸಭಾ ಸ್ಥಾನಗಳನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ. ವಿಜಯೇಂದ್ರ ನೇತೃತ್ವದಲ್ಲಿ ಅದು ಎಲ್ಲಾ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ಎಲ್ಲೆಡೆ ತೃಷ್ಟಿಕರಣ ರಾಜಕೀಯ ಮಾಡುತ್ತಿದೆ. ದೇಶದಲ್ಲೆಡೆ ಜೈ ಶ್ರೀರಾಮ್ ಜೈ ಶ್ರೀರಾಮ್ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಜೈಶ್ರೀರಾಮ್ ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕರು ತೃಷ್ಟೀಕರಣದ ರಾಜಕೀಯ ಮಾಡುವುದರಲ್ಲೇ ಇದ್ದಾರೆ ಎಂದು ಹೇಳಿದರು.