ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಅನ್ನದಾತನ ಮೊಗದಲ್ಲಿನ ನಗುವನ್ನು ಕಿತ್ತುಕೊಂಡಿದೆ. ಸರಿಯಾಗಿ ಮಳೆ ಬೀಳದೇ ಕೃಷಿಗೆ ನೀರಿಲ್ಲದೆ ರೈತ ಪರದಾಡುತ್ತಿದ್ದಾರೆ.
ಬರಗಾಲದಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರ ಎರಡು ಸಾವಿರ ರೂಪಾಯಿ ನೀಡಲು ನಿರ್ಧಾರ ಮಾಡಿದೆ. ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಇಂದು ರೈತರ ಖಾತೆಗೆ ಹಣ ಜಮಾ ಆಗಲಿದೆ.
ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದರು.