ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಸರ್ಕಾರಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಶೋಧಕಾರ್ಯ ನಡೆದಿದೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಶೋಧ ನಡೆದಿದೆ.
ಕುಂದಣ ಪಿಡಿಒ ಪದ್ಮನಾಭ್ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇನ್ನು ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಹಾಗೂ ಅವರ ಸಂಬಂಧಿಗಳ ಮನೆಗಳ ಮೇಲೆ ಲೋಕಾ ದಾಳಿ ನಡೆದಿದೆ.
ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ ಹಾಗೂ ಜಮೀನು ಖರೀದಿ ಆರೋಪದ ಮೇಲೆ ದಾಳಿ ನಡೆದಿದೆ.