ಹೊಸದಿಂಗತ ಡಿಜಿಟಲ್ ಡೆಸ್ಕ್:
ಇಡೀ ರಾಷ್ಟ್ರವೇ ರಾಮನ ಮಂದಿರಕ್ಕಾಗಿ ಕಾಯುತ್ತಿದೆ. ಆ ಕ್ಷಣಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಜನರಿಗೆ ಗುಡ್ ನ್ಯೂಸ್ ಕೊಡಲು ಮುಂದಾಗಿದೆ.
ಕರ್ನಾಟಕದ ಮುಜರಾಯಿ ಇಲಾಖೆ ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಒಂದು ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಇನ್ನೇನು ಕೆಲ ದಿನಗಳಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದಕ್ಕೂ ಮೊದಲೇ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿರುವ ಸರ್ಕಾರ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯ್ಯೋಧ್ಯೆಗೆ ಬರುತ್ತಾರೆ. ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಿದೆ.
ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪತ್ರವನ್ನ ಬರೆದು ಮನವಿ ಮಾಡಿದ್ದರು. 2020ರಲ್ಲಿ ಯುಪಿ ಸಿಎಂಗೆ ಯಡಿಯೂರಪ್ಪ ಕೂಡ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದ ಮನವಿಗೆ ಯುಪಿ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಲಾಗಿದೆ.