ಬೆಳಗಾವಿ ಡಿಸಿ ಕಚೇರಿಯಲ್ಲಿಯೇ ಅತ್ಮಹತ್ಯೆಗೆ ಯತ್ನಿಸಿದ ಗೋಕಾಕ್ ಯುವಕ

ಹೊಸದಿಗಂತ ವರದಿ, ಬೆಳಗಾವಿ:

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರಿಮಿನಾಶಕ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಕುಮಾರ್ ಕಲ್ಲಪ್ಪ ಕೊಪ್ಪದ (23) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥನಾಗಿರುವ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೂಡಲೇ ಸ್ಥಳಕ್ಕೆ ಧಾವಿಸಿದ ಮಾರ್ಕೆಟ್ ಠಾಣೆ ಪೊಲೀಸರು ಅಸ್ವಸ್ಥಗೊಂಡು ಬಿದ್ದಿದ್ದ ಕುಮಾರನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಆರೋಗ್ಯ ಸಮಸ್ಯೆಯಿಂದ ಯುವಕ ಬಳಲುತ್ತಿದ್ದ ಎಂಬುದು ಗೊತ್ತಾಗಿದೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!