ಭಾರತ-ಆಫ್ಘಾನಿಸ್ತಾನ ಮೊದಲ ಟಿ20 ಮ್ಯಾಚ್ ನಿಂದ ಕೊಹ್ಲಿ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ತಂಡದ ರನ್‌ ಮಷೀನ್ ವಿರಾಟ್ ಕೊಹ್ಲಿ ಮೊದಲ ಟಿ20 ಪಂದ್ಯದಿಂದ ಹೊರಬಿದ್ದಿದ್ದಾರೆ.

ಟಿ20 ಸರಣಿಯ ಮೊದಲ ಪಂದ್ಯವು ಜನವರಿ 11ರಂದು ಆರಂಭವಾಗಲಿದ್ದು, ಈ ಪಂದ್ಯಕ್ಕೆ ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಸಂಸ್ಥೆಯ ಐಎಸ್ ಬಿಂದ್ರಾ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಇದೀಗ ವೈಯುಕ್ತಿಕ ಕಾರಣದಿಂದಾಗಿ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರಿನ ಮೊದಲ ಟಿ20 ಪಂದ್ಯಕ್ಕೆ ಅಲಭ್ಯರಾಗಿರುವುದಾಗಿ ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ.

ಈ ಮೊದಲು ಆಫ್ಘಾನಿಸ್ತಾನ ಎದುರಿನ ಸರಣಿಯಲ್ಲಿ ರೋಹಿತ್ ಶರ್ಮಾ ಜತೆ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆದರೆ ಮೊದಲ ಪಂದ್ಯಕ್ಕೆ ಕೊಹ್ಲಿ ಅಲಭ್ಯತೆ ಹಿನ್ನೆಲೆಯಲ್ಲಿ ಜೈಸ್ವಾಲ್ ಹಾಗೂ ಗಿಲ್‌ ನಡುವೆ ಆರಂಭಿಕ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿತ್ತು.

ಈ ವಿಚಾರದ ಕುರಿತಂತೆ ಗೊಂದಲಕ್ಕೆ ತೆರೆ ಎಳೆದಿರುವ ಹೆಡ್ ಕೋಚ್ ರಾಹುಲ್ ದ್ರಾವಿಡ್, ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಆಡಲಿರುವ ಕಟ್ಟಕಡೆಯ ಅಂತಾರಾಷ್ಟ್ರೀಯ ಟಿ20 ಸರಣಿ ಇದಾಗಿದೆ. ಆಫ್ಘಾನ್ ಎದುರಿನ ಸರಣಿ ಮುಗಿದ ಬಳಿಕ ಟೀಂ ಇಂಡಿಯಾ, ತವರಿನಲ್ಲಿ ಇಂಗ್ಲೆಂಡ್ ಎದುರು 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!