ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ನೋಯ್ಡಾದಲ್ಲಿ 33 ವರ್ಷದ ಮಹಿಳೆಯೊಬ್ಬರು ತಮ್ಮ ಆರು ತಿಂಗಳ ಮಗುವಿನ ಸಮೇತ ಮಹಡಿಯಿಂದ ಹಾರಿ ಪ್ರಾಣಬಿಟ್ಟಿದ್ದಾರೆ.
ಲಾ ರೆಸಿಡೆನ್ಶಿಯಾ ಸೊಸೈಟಿಯ ಅಪಾರ್ಟ್ಮೆಂಟ್ನ 16ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಸಾರಿಕಾ ಏಕಾಏಕಿ ಮಗುವಿನ ಸಮೇತ ಕೆಳಕ್ಕೆ ಹಾರಿದ್ದಾರೆ.
ದೊಡ್ಡ ಶಬ್ದಕ್ಕೆ ಸೆಕ್ಯುರಿಟಿ ಓಡಿ ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗುವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸಾರಿಕಾ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಪ್ರಸವ ನಂತರದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.