ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನ ಅಹಮದಾಬಾದ್ ನಿಂದ ಗುರುವಾರ ಅಯೋಧ್ಯೆಗೆ ಆಗಮಿಸಿದ ಮೊದಲ ವಿಮಾನ ಆಗಮಿಸಿದ್ದು, ಈ ವೇಳೆ ಪ್ರಯಾಣಿಕರ ಜೊತೆ ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಾನ್ ನ (ವೇಷಧಾರಿಗಳು ) ಆಗಮನವಾಗಿದೆ.
ಇಂದು ಬೆಳಗ್ಗೆ 9 ಗಂಟೆಗೆ ಅಹಮದಾಬಾದ್ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದಇಂಡಿಗೋ ವಿಮಾನದಲ್ಲಿ ಹಲವಾರು ಭಕ್ತರು ಭಗವಾನ್ ರಾಮ, ಲಕ್ಷ್ಮಣ ಮತ್ತು ಸೀತೆಯ ವೇಷಭೂಷಣ ಧರಿಸಿ ಪ್ರಯಾಣಿಕರು ಆಗಮಿಸಿದ್ದಾರೆ.
#WATCH | Gujarat: As the first flight for Ayodhya leaves from Ahmedabad, passengers arrive at the airport dressed as Lord Ram, Lakshman, Sita, and Hanuman. pic.twitter.com/3EviO4mxzV
— ANI (@ANI) January 11, 2024
ಹಲವು ಭಕ್ತರು “ಜೈ ಶ್ರೀ ರಾಮ್” ಎಂದು ಘೋಷಣೆಗಳನ್ನು ಕೂಗುತ್ತಾ ಅಯೋಧ್ಯೆ ವಿಮಾನ ಏರಿದರು. ವಿಮಾನವು ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದಿಳಿಯಿತು.
ಅಯೋಧ್ಯೆಯಲ್ಲಿ ಪವಿತ್ರ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ಪೂರ್ವಭಾವಿಯಾಗಿ, ಉತ್ತರ ಪ್ರದೇಶ ಸರ್ಕಾರ ಸುಧಾರಿತ ಭದ್ರತೆ ಮತ್ತು ಸಂಚಾರ ನಿರ್ವಹಣಾ ಕ್ರಮಗಳನ್ನು ಒಳಗೊಂಡ ಸಮಗ್ರ ಯೋಜನೆ ಜಾರಿಗೆ ತಂದಿದೆ.