ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ (KS Eshwarappa) ಇಂದು(ಜನವರಿ 11) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ಬಗ್ಗೆ ಸಮಲೋಚನೆ ಮಾಡಿದ್ದಾರೆ. ಈ ವೇಳೆ ಪಕ್ಷದಲ್ಲಿನ ಕೆಲವೊಂದು ಸಮಸ್ಯೆ, ಗೊಂದಲಗಳ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.