ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ ಅಸ್ವಸ್ಥರಾಗಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹಾಸ್ಟೆಲ್ಗೆ ತೆರಳಿದ ಎಂಟು ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ನೀಡಿದ ಮೊಟ್ಟೆಯಿಂದ ಹೀಗಾಗಿದೆ ಎಂದು ಅಂದಾಜಿಸಲಾಗಿದೆ. ಮೊಟ್ಟೆ ಕೊಳೆತಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.