ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ಯಾನ್ ಇಂಡಿಯಾ ಮೂಲಕ ಬ್ಲಾಕ್ ಬಸ್ಟರ್ ಸಿನಿಮಾ ನೀಡಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದೊಡ್ಡ ಹಿಟ್ ಆದ ʼಸಲಾರ್ʼ ಚಿತ್ರತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ನಟ ಪ್ರಭಾಸ್ ಶುಕ್ರವಾರದಂದು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲೀಕ ‘ಸಲಾರ್’ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಜೊತೆಗಿದ್ದರು.
ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಪ್ರಭಾಸ್ಗೆ ದೇವಾಲಯದ ವತಿಯಿಂದ ದೇವಿಯ ವಿಗ್ರಹ ನೀಡಿ ಗೌರವ ಸಲ್ಲಿಸಲಾಗಿದೆ.