ಹೊಸದಿಂಗತ ಡಿಜಿಟಲ್ ಡೆಸ್ಕ್:
ನಾನು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಎರಡು ವರ್ಷಗಳ ಕಾಲ ಇದೆ. ನನಗೆ 91 ವರ್ಷ ನೆನಪಿನ ಶಕ್ತಿ ಕಡಿಮೆಯಾಗುತ್ತಿದೆ, ಚಲಿಸಲು ಕಷ್ಟವಾಗುತ್ತದೆ. ಆದರೆ ಜೆಡಿಎಸ್, ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಎಚ್.ಡಿ. ಕುಮಾರಸ್ವಾಮಿ ಇನ್ನೂ ನಿರ್ಧರಿಸಿಲ್ಲ. ನಾನು ಸುದ್ದಿ ಪ್ರಸಾರದ ಬಗ್ಗೆ ಮಾತನಾಡುವುದಿಲ್ಲ. ಮೋದಿ ಏನಾದರೂ ಹೇಳಿದರೆ ನಾವೆಲ್ಲರೂ ಕುಳಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರೋ ಇಲ್ಲವೋ ಎಂಬ ಪ್ರಶ್ನೆ ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಏನು ಆಲೋಚಿಸುತ್ತಾರೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಜೊತೆಗಿದ್ದ ಪೊಲೀಸರಿಗೂ ಗೊತ್ತಾಗಲ್ಲ ಎಂದು ಹೇಳಿದರು.