ಹೊಸದಿಗಂತ ವರದಿ ಮುಂಡಗೋಡ:
ಕಾರ್ ಹಾಗೂ ಟ್ರ್ಯಾಕ್ಟರ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ರಭಸಕ್ಕೆ ಕಾರ್ ಪಲ್ಟಿಯಾದ ಘಟನೆ ತಾಲೂಕಿನ ತಟ್ಟಿಹಳ್ಳಿಯ ಟಿಬೆಟಿಯನ್ ಕ್ಯಾಂಪ್ ಹತ್ತಿರ ಗುರುವಾರ ಸಾಯಂಕಾಲ ಜರುಗಿದೆ.
ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ತೆರಳುತ್ತಿರುವ ಕಾರು ಹಾಗೂ ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಟ್ರಾಕ್ಟರ್ ಗೆ ಮುಖಾಮುಕಿ ಡಿಕ್ಕಿಯಾಗಿ ರಭಸಕ್ಕೆ ಕಾರು ಪಲ್ಟಿಯಾಗಿದೆ.
ಕಾರಲ್ಲಿದ್ದ ಒಂದು ಪುಟ್ಟ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ ಸ್ಥಳಕ್ಕೆ ಬಂದ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

