ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಲೇಔಟ್ ನ ಅನಧಿಕೃತ ಮನೆಗಳ ತೆರವು ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ಗೆ ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.
ಮನೆ ಕಳೆದುಕೊಂಡಿರುವ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಬೇಕು ಎಂದು ಕೋರಿ ಜೈಬಾ ತಬಸ್ಸುಮ್ ಹಾಗೂ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.
ಕಳೆದ 30 ವರ್ಷಗಳಿಂದ ಇಲ್ಲಿ 3 ಸಾವಿರ ಜನ ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರಾಶ್ರಿತರಾಗಿದ್ದು, ಅವರಿಗೆ ಎಸ್ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ.
ಸರ್ಕಾರ ಸಂತ್ರಸ್ತರಿಗೆ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು ಅಲ್ಲಿಯವರೆಗೆ 3 ಹೊತ್ತಿನ ಪೌಷ್ಟಿಕಾಂಶಯುತ ಆಹಾರ ಒದಗಿಸಬೇಕು. 300 ಪ್ರತ್ಯೇಕ ಟೆಂಟ್, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಆರೋಗ್ಯ ತಪಾಸಣೆ ಮಾಡಬೇಕು. ಜೊತೆಗೆ ಕಟ್ಟಡ ತೆರವಿಗೆ ಪರಿಹಾರ ನೀಡಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿದೆ.

