ಹೊಸದಿಗಂತ, ಮಡಿಕೇರಿ:
ಬೆಂಗಳೂರು ಮೂಲದ ಟೆಕ್ಕಿಯೊಬ್ಬರು ಮಡಿಕೇರಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಂಡು ಬಂದಿದೆ.
ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿದ್ದ ಸಂದೇಶ್(35) ಮೃತ ಯುವಕ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಗೆ ಆಗಮಿಸಿದ್ದ ಸಂದೇಶ್, ನಗರದ ಕೊಹಿನೂರು ರಸ್ತೆಯ ಲಾಡ್ಜ್ ಒಂದರಲ್ಲಿ ತಂಗಿದ್ದರೆನ್ನಲಾಗಿದೆ.
ಮಂಗಳವಾರ ಬೆಳಗ್ಗೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶಣಾಗಿದ್ದು, ಮಡಿಕೇರಿ ನಗರ ಠಾಣೆ ಪೊಲೀಸರು ಮಹಜರು ನಡೆಸಿದ್ದಾರೆ. ಸಂದೇಶ್ ಬರೆದಿಟ್ಟಿದ್ದೆನ್ನಲಾದ ಡೆತ್ ನೋಟ್ ಕೂಡಾ ಪತ್ತೆಯಾಗಿದ್ದು, ಅದರಲ್ಲೇನಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.