ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿನ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಮಾರಂಭದ ಆಹ್ವಾನವನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರು ತಿರಸ್ಕರಿಸಿದ್ದಾರೆ.
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಆಹ್ವಾನವನ್ನು ತಿರಸ್ಕರಿಸಿದ ಇತ್ತೀಚಿನ ವಿರೋಧ ಪಕ್ಷದ ನಾಯಕರಲ್ಲಿ 75 ವರ್ಷದ ಲಾಲೂ ಪ್ರಸಾದ್ ಕೂಡ ಸೇರಿಕೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆಯುವುದಾಗಿ ತಿಳಿಸಿದ್ದಾರೆ. ವಿಶೇಷವೆಂದರೆ, ಎಲ್‌ಕೆ ಆಡ್ವಾಣಿ ನೇತೃತ್ವದಲ್ಲಿ ನಡೆದ ರಥಯಾತ್ರೆಯನ್ನು ಬಿಹಾರದ ಸಮಷ್ಟಿಪುರದಲ್ಲಿ ನಿಲ್ಲಿಸಿದ್ದ ಲಾಲೂ ಪ್ರಸಾದ್ ಯಾದವ್ ಈಗ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೂ ಬರಲು ನಿರಾಕರಿಸಿದ್ದಾರೆ.