ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಮಮಂದಿರದಲ್ಲಿ ಜ.22ರಂದು ರಾಮಲಲಾನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದರ ನಡುವೆ ವಿ.ಎಚ್.ಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಿಗೆ ರಜೆ ನೀಡುವಂತೆ ಮನವಿ ಸಲ್ಲಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಭಾಗವಹಿಸಲು ಅನುವು ಮಾಡಿಕೊಡುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಈ ನಿಟ್ಟಿನಲ್ಲಿ ಜನವರಿ 22ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ಅವಧಿಯಲ್ಲಿ ರಜೆ ನೀಡುವಂತೆ ವ್ಯಾಪಾರ ಮಳಿಗೆಗಳು, ಹೊಟೇಲ್ ಉದ್ಯಮಿಗಳು, ಫ್ಯಾಕ್ಟರಿಗಳು, ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ಉದ್ಯಮಪತಿಗಳಲ್ಲಿ ವಿ.ಎಚ್.ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಮನವಿ ಸಲ್ಲಿಸಿದ್ದಾರೆ.