ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು (ಪ್ರಾಣ ಪ್ರತಿಷ್ಠಾ) ದೇಶಾದ್ಯಂತ ರೈಲ್ವೆ ನಿಲ್ದಾಣಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ರೈಲ್ವೆ ಹೇಳಿದೆ.
ದೇಶದಾದ್ಯಂತ ರೈಲು ನಿಲ್ದಾಣಗಳಲ್ಲಿ ಕನಿಷ್ಠ 9,000 ಸ್ಕ್ರೀನ್‌ಗಳು ಲಭ್ಯವಿವೆ.ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ನೇರ ಪ್ರಸಾರ ತೋರಿಸಲು ಈ ಪರದೆಗಳನ್ನು ಬಳಸಬಹುದು ಎಂದು ಸರ್ಕಾರಿ ಮೂಲಗಳು ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
Railways will facilitate its passengers with live streaming of Pranpratishtha ceremony of Lord Ram in Ayodhya across the country. At least 9000 screens are available at railway stations across the country: Railway Sources
— ANI (@ANI) January 18, 2024
ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ಘೋಷಿಸಿತು. ಈ ಸಂಬಂಧ ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮಧ್ಯಾಹ್ನ 02:30 ರವರೆಗೆ ಅರ್ಧ ದಿನ ಮುಚ್ಚಿರುತ್ತದೆ.