ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ದೇಗುಲದಲ್ಲಿ ಈಗಾಗಲೇ ಬಾಲರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಜನವರಿ 22ಕ್ಕೆ ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳಲಿದೆ. ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಇಡೀ ವಿಶ್ವವೇ ತುದಿಗಾಲಲ್ಲಿ ನಿಂತಿದೆ.
ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಲಾಗಿತ್ತು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜನವರಿ 21 ರಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಯೋಧ್ಯೆಗೆ ತೆರಳಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಮಲಲಾ ಪ್ರತಿಷ್ಠಾದಲ್ಲಿ ಭಾಗಿಯಾಗಿರುವುದು ಗೌರವದ ಸಂಗತಿ ಎಂದರು. ಐನೂರು ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ರಾಮನ ಮೂರ್ತಿಯನ್ನು ಕೆತ್ತಿದ ಅರುಣ್ ಯೋಗಿರಾಜ್ ನಮ್ಮ ಮೈಸೂರು ನಗರದವರು. ನಾನು ಅವರನ್ನು ಅಭಿನಂದಿಸುತ್ತೇನೆ. ರಾಮಲಲಾ ಪ್ರತಿಮೆ ಮೈಸೂರಿನ ಜನತೆಯ ಹೆಮ್ಮೆ ಎಂದರು.