ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 50 ದಿನಗಳ ಪೆರೋಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 50 ದಿನಗಳ ಪೆರೋಲ್ ನೀಡಲಾಗಿದೆ. ಈ ಮೂಲಕ ಮತ್ತೆ 50 ದಿನಗಳ ಕಾಲ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ 2023ರ ನವೆಂಬರ್ನಲ್ಲಿ 21 ದಿನಗಳ ಪೆರೋಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.ಕಳೆದ ವರ್ಷ ಅವರಿಗೆ ಮೂರು ಬಾರಿ ಪೆರೋಲ್ ನೀಡಲಾಗಿತ್ತು.

ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಪ್ರಮುಖ ಅನುಯಾಯಿಗಳನ್ನು ಹೊಂದಿರುವ 56 ವರ್ಷದ ರಾಮ್ ರಹೀಮ್, ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಹಲವಾರು ಬಾರಿ ಪೆರೋಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!