ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನು ಒಂದು ವಾರದವರೆಗೆ ಹಲವೆಡೆ ಒಣ ಹವೆ ಇರುತ್ತದೆ. ಸಮುದ್ರ ಮಟ್ಟ ತಗ್ಗಿದ್ದರೂ ಅದರ ಪ್ರಭಾವದಿಂದ ಮಳೆಯಾಗುವ ಲಕ್ಷಣ ಕಾಣುತ್ತಿಲ್ಲ. ಬದಲಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ಇರುತ್ತದೆ. ರಾತ್ರಿಯಲ್ಲಿ ತಂಪಾದ ಗಾಳಿ ಬೀಸುತ್ತದೆ.
ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ಕೆಲವೆಡೆ ಮೋಡ ಕವಿದ ವಾತಾವರಣವಿರುತ್ತದೆ. ಬೆಂಗಳೂರಿನ ಸುತ್ತಮುತ್ತ ದಟ್ಟ ಮಂಜು ಕವಿದಿದ್ದು, ಹಲವೆಡೆ ಮುಂಜಾನೆ ಇಬ್ಬನಿ ಬೀಳಲಿದೆ. ಹಗಲು ರಾತ್ರಿ ಚಳಿ ಜಾಸ್ತಿಯಾಗುತ್ತದೆ.
ಇದರೊಂದಿಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಕರಾವಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಬಲವಾದ ಗಾಳಿ ಬೀಸಲಿದೆ. ಕೆಲವು ಸ್ಥಳಗಳಲ್ಲಿ, ಗರಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತದೆ.