ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಗೆ ನಾಯಿ ಕಚ್ಚಿದ್ದ ಪ್ರಕರಣದಲ್ಲಿ ನಟ ದರ್ಶನ್ ಗೆ ರಿಲೀಫ್ ಸಿಕ್ಕಿದೆ.ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಪೊಲೀಸರು ನಟ ದರ್ಶನ್ ಹೆಸರು ಕೈ ಬಿಟ್ಟಿದ್ದಾರೆ.
ನಟ ದರ್ಶನ್ ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.3 ತಿಂಗಳ ನಂತರ ಪೊಲೀಸರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಪ್ರಕರಣದಲ್ಲಿ ದರ್ಶನ್ ಅವರ ಪಾತ್ರ ಇಲ್ಲದೆ ಇರುವುದು ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರ ಹೆಸರು ಸೇರಿಸದಿರಲು ಪೊಲೀಸರು ನಿರ್ಧರಿಸಿದ್ದರು.ಅಮಿತಾ ಜಿಂದಾಲ್ ಎಂಬ ಮಹಿಳೆಗೆ ದರ್ಶನ್ ಅವರ ಮನೆಯ ಸಾಕಿದ ನಾಯಿಗಳು ಕಚ್ಚಿದ್ದು, ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದರ್ಶನ್ ಕೂಡ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣ ನಡೆಯುವ ಸಂದರ್ಭದಲ್ಲಿ ತಾವು ಇರಲಿಲ್ಲ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದರು.