ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ವಿದೇಶಗಳಲ್ಲಿ ಭಾರೀ ಕೌತುಕ ಮೂಡಿಸಿದ್ದ ಅಯೋಧ್ಯೆ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿ ಪ್ರಕರಣದ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳು ಹಾಗೂ ಸುಪ್ರೀಂ ಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗಮಿಸುವಂತೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ.
2019ರ ನವೆಂಬರ್ 9ರಂದು ಹೊರಬಿದ್ದ ಈ ಐತಿಹಾಸಿಕ ತೀರ್ಪಿನ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಹಾಲಿ ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್, ನ್ಯಾ. ಎಸ್.ಎ. ಬೊಬ್ಡೆ, ನ್ಯಾ. ಅಶೋಕ್ ಭೂಷಣ್ ಹಾಗೂ ನ್ಯಾ. ಎಸ್.ಅಬ್ದುಲ್ ನಜೀರ್ ಅವರನ್ನು ಟ್ರಸ್ಟ್ ಸಮಾರಂಭಕ್ಕೆ ಆಹ್ವಾನಿಸಿದೆ.
ಇದಲ್ಲದೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ನ್ಯಾಯಾಂಗಕ್ಕೆ ಸೇರಿದ 50 ಪ್ರಮುಖರನ್ನು ಆಹ್ವಾನಿಸಲಾಗಿದೆ.
ನ್ಯಾಯಾಧೀಶರು, ಪ್ರಮುಖ ವಕೀಲರು. ರಾಮಲಲ್ಲ ಪರ ವಕೀಲ ಕೆ. ಪರಸರಣ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಾಜಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೆಸರು ಈ ಆಹ್ವಾನಿತರ ಪಟ್ಟಿಯಲ್ಲಿದೆ.