ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮ ಮಂದಿರ ದಿನದಂದು ರಜೆ ಘೋಷಿಸಲು ಮನವಿ ಮಾಡಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಣೆ ಹಲವು ಸಂಘಟನೆಗಳಿಂದ ಮನವಿಸಲಾಗಿದೆ. ಸಿಎಂ ಸಿದ್ದರಾಮಯ್ಯರಿಗೆ ಎಲ್ಲಾ ಸರ್ಕಾರಿ ಕಚೇರಿ, ಶಾಲೆ ಸೇರಿದಂತೆ ಎಲ್ಲದಕ್ಕೂ ರಜೆ ಘೋಷಿಸಲು ಹಾಗೂ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಲು ಟ್ವೀಟ್ ಮೂಲಕ ರಜೆ ನೀಡಲು ಕರವೇ ಮನವಿ ಸಲ್ಲಿಸಿದೆ.
ಅಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೋರಿದ್ದರೆ, ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿತರ ನಾಯಕರು ರಜೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.